ವಯನಾಡು ಲೋಕಸಭಾ ಕ್ಷೇತ್ರದಿಂದ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಹೋದರಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇರಳದ ಸ್ಥಳೀಯ ನಾಯಕರು ಉಪಸ್ಥಿರಿದ್ದರು. ವಯನಾಡು ಜಿಲ್ಲಾಧಿಕಾರಿ, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಹುಲ್ ಗಾಂಧಿ, 2ನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಬೆಳಗ್ಗೆ ವಯನಾಡಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿ, ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ವರೆಗೂ ಬೃಹತ್ ರೋಡ್ ಶೋ ನಡೆಸಿದ್ರು. ವಯನಾಡ್ ನನ್ನ ಮನೆ ಇದ್ದಂತೆ, ಇಲ್ಲಿನ ಜನರೇ ನನ್ನ ಕುಟುಂಬ. ವಯನಾಡ್ ಜನತೆಯ ಅಚಲ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.