2024 ರಲ್ಲಿ ಆಸ್ಟ್ರೇಲಿಯಾ, ಸನ್ರೈಸರ್ಸ್ ಹೈದರಾಬಾದ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳ ಪರ ಇನಿಂಗ್ಸ್ ಆರಂಭಿಸಿರುವ ಟ್ರಾವಿಸ್ ಹೆಡ್ ಇದೀಗ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಪವರ್ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 1000+ ರನ್ ಕಲೆಹಾಕುವ ಮೂಲಕ ಎಂಬುದೇ ವಿಶೇಷ.
ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಚುಟುಕು ಕ್ರಿಕೆಟ್ನ ಪವರ್ಪ್ಲೇನಲ್ಲಿ ಪವರ್ಫುಲ್ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. ಅಂದರೆ 2024 ರಲ್ಲಿ ಟಿ20 ಕ್ರಿಕೆಟ್ನ ಮೊದಲ 6 ಓವರ್ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಹೆಡ್ ಪಾಲಾಗಿದೆ.
ಟ್ರಾವಿಸ್ ಹೆಡ್ 2024 ರಲ್ಲಿ ಈವರೆಗೆ 38 ಟಿ20 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಪವರ್ಪ್ಲೇನಲ್ಲೇ 1027 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ವರ್ಷ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಫಿಲ್ ಸಾಲ್ಟ್. ಈ ವರ್ಷ 44 ಟಿ20 ಇನಿಂಗ್ಸ್ ಆಡಿರುವ ಸಾಲ್ಟ್ ಪವರ್ಪ್ಲೇನಲ್ಲಿ ಒಟ್ಟು 827 ರನ್ ಕಲೆಹಾಕಿದ್ದಾರೆ.
ಹಾಗೆಯೇ ಮೂರನೇ ಸ್ಥಾನದಲ್ಲಿರುವುದು ಸೌತ್ ಆಫ್ರಿಕಾ ಕ್ರಿಕೆಟಿಗ ಫಾಫ್ ಡುಪ್ಲೆಸಿಸ್. ಆರ್ಸಿಬಿ ನಾಯಕ ಈ ವರ್ಷ 38 ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ ಪವರ್ಪ್ಲೇನಲ್ಲಿ ಒಟ್ಟು 807 ರನ್ ಕಲೆಹಾಕಿದ್ದಾರೆ.
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಪವರ್ಪ್ಲೇನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ ಪವರ್ಪ್ಲೇನಲ್ಲಿ ಒಟ್ಟು 2141 ರನ್ ಕಲೆಹಾಕಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.