ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಟೀಂ ಹೈದರಾಬಾದ್ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ. ನಿಗಮದಿಂದ ನಕಲಿ ಖಾತೆಗಳಿಗೆ ವರ್ಗಾವಣೆಯಾದ ಹಣದ ಜಾಡು ಹಿಡಿದ ಎಸ್ಐಟಿ, ಪ್ರಕರಣದಲ್ಲಿ ಬಂಧಿತನಾಗಿದ್ದ ಸತ್ಯನಾರಾಯಣ ವರ್ಮಾ ಐಷಾರಾಮಿ ಕಾರು ಡೀಲರ್ಗೆ 3.3 ಕೋಟಿ ರೂಪಾಯಿ ನೀಡಿದ್ದರು. ಎಸ್ಐಟಿ ಅಧಿಕಾರಿಗಳು ಕಾರನ್ನು ಪತ್ತೆಹಚ್ಚಿ ವಶಪಡಿಸಿಕೊಂಡು ಡೀಲರ್ಗೆ ಹಿಂತಿರುಗಿಸಿದ್ದು ಹಣವನ್ನೂ ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಹಗರಣದಲ್ಲಿ ಸತ್ಯನಾರಾಯಣ ವರ್ಮಾ 13ನೇ ಆರೋಪಿಯಾಗಿದ್ದಾರೆ. ಈ ನಡುವೆ ನ್ಯಾಯಾಲಯದಲ್ಲಿ ಸಿಐಡಿ ವಿರುದ್ಧ ಸತ್ಯನಾರಾಯಣ ಹಲವು ಆರೋಪಗಳನ್ನು ಮಾಡಿದ್ದಾರೆ. ಸಿಐಡಿ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದು, ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ. ತನ್ನ ಬಂಧನದ ನಂತರ ನಾಲ್ಕು ದಿನಗಳ ಕಾಲ ಅಧಿಕಾರಿಗಳು ನನ್ನ ಕುಟುಂಬಕ್ಕೆ ತಿಳಿಸಲಿಲ್ಲ, ಸಿಐಡಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನ್ಯಾಯಾಲಯದ ಮುಂದೆ ಗೌಪ್ಯ ಹೇಳಿಕೆ ನೀಡಲು ಅವಕಾಶ ನೀಡುವಂತೆ ಸತ್ಯನಾರಾಯಣ ವರ್ಮಾ ನ್ಯಾಯಾಲಯವನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ.