ಭಾರತದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅದೂರಿ ವಿವಾಹ ಮುಂಬೈನಲ್ಲಿ ಶುಕ್ರವಾರ ನಡೆಯಲಿದೆ. ಮದುವೆಗೆ ಅಂದಾಜು 5000 ಕೋಟಿ ರುಪಾಯಿ ಖರ್ಚು ಮಾಡಲಾಗುತ್ತಿದೆ.
ಮುಂಬೈನ ಜಿಯೋ ವರ್ಲ್ಡ್ ಕನ್ವೆಂಷನ್ ಸೆಂಟರ್ ನಲ್ಲಿ ವಿವಾಹ ನಡೆಯಲಿದ್ದು ಹಾಲಿವುಡ್, ಬಾಲಿವುಡ್ನನ ಖ್ಯಾತ ನಟರು, ಜಾಗತಿಕ ಉದ್ಯಮಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಮತ್ತು ಇತರೆ ಗಣ್ಯರು ಭಾಗಿಯಾಗಲಿದ್ದಾರೆ.
ಖ್ಯಾತ ಪಾಪ್ ಗಾಯಕಿ ಕಿಮ್ ಮತ್ತು ಖ್ಲೋ ಕರ್ದಾಶಿಯಾನ್, ಬಾಕ್ಸರ್ ಮೈಕ್ ಟೈಸನ್, ಬ್ರಿಟನ್ನ ಮಾಜಿ ಪ್ರಧಾನಿಗಳಾದ ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಇಂಗ್ಲೆಂಡ್ ಫುಟ್ಬಾಲ್ ತಾರೆ ಡೇವಿಡ್ ಬೆಕ್ ಹ್ಯಾಮ್, ನಟರಾದ ಸಲ್ಮಾನ್ ಖಾನ್, ಶಾರುಖ್ ಖಾನ್, ಅಮಿರ್ ಖಾನ್, ಅಕ್ಷಯ್ ಕುಮಾರ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಪ್ರಿಯಾಂಕಾ ಚೋಪ್ರಾ ಹಾಗೂ ಐಶ್ವರ್ಯರೈ ದಂಪತಿ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.