ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿರುವುದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾದಲ್ಲಿರುವ ಕನ್ನಡಿಗ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಗೋವಾ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸ್ಥಳಾಂತರಗೊಂಡ ಕುಟುಂಬಗಳಿಗೆ ಪುನರ್ವಸತಿಯನ್ನು ಕಲ್ಪಿಸುವಂತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ಗೆ ಒತ್ತಾಯಿಸಿದ್ದಾರೆ.