ಬೆಂಗಳೂರಿನ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಟ್ರಾಫಿಕ್ ಸಿಗ್ನಲ್ ಸೇರಿದಂತೆ ಜನಸಂದಣಿ ಇರುವ ಪ್ರದೇಶಗಳಲ್ಲಿ ಭಿಕ್ಷುಕರ ಹಾವಳಿ ಹೆಚ್ಚಾಗಿದೆ. ಇದೀಗ ನಮ್ಮ ಮೆಟ್ರೋಗೂ ಭಿಕ್ಷಾಟನೆ ಕಾಲಿಟ್ಟಿದೆ. ನಮ್ಮ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ಘಟನೆ ಬೆಳಕಿಗೆ ಬಂದಿದೆ.
ಹೌದು. ನಮ್ಮ ಮೆಟ್ರೋ ರೈಲು ಒಳಗಡೆ ವಿಶೇಷ ಚೇತನ ವ್ಯಕ್ತಿಯೊಬ್ಬ ಭಿಕ್ಷಾಟನೆ ಮಾಡಿದ್ದಾನೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಕರಂತೆ ಬಂದ ವ್ಯಕ್ತಿ ಭಿಕ್ಷೆ ಬೇಡಿದ್ದಾನೆ.ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆದು ಭಿಕ್ಷೆ ಬೇಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ.
ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಮ್ಮ ಮೆಟ್ರೊದಲ್ಲೂ ಭಿಕ್ಷುಕರು ಭಿಕ್ಷೆ ಬೇಡುವುದಕ್ಕೂ ಶುರು ಮಾಡಿದ್ರಾ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಏನೇ ಆಗಿದ್ದರೂ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುವುದಕ್ಕೆ ಅವಕಾಶವಿಲ್ಲ.