ರಾಜ್ಯದ ಜನರ ಬಹುದಿನದ ಪ್ರಾರ್ಥನೆ ಕೊನೆಗೂ ಯುಗಾದಿ ಹಬ್ಬದಂದು ನೆರವೇರಿದೆ. ಬಿಸಿಲಿನ ಬೇಗೆಗೆ ಹೈರಾಣಾಗಿದ್ದ ಜನರಿಗೆ ಕೊನೆಗೂ ಕೂಲ್ ಅನ್ನಿಸೋ ದಿನ ಬಂದೆ ಬಂದಿದೆ. ಹೌದು ವಿಪರೀತ ಬಿಸಿಲಿಗೆ, ಕುಡಿಯುವ ನೀರಿನ ಸಮಸ್ಯೆಗೆ ಸುಸ್ತ್ ಆಗಿದ್ದ ಜನರಿಗೆ ಹಬ್ಬದಂದು ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಿದೆ.
ಕೊಡಗು, ಚಿಕ್ಕಮಗಳೂರು, ಮೈಸೂರು, ಸೇರಿದಂತೆ ಹಲವು ಕಡೆಗಳಲ್ಲಿ ಈಗಾಗಲೆ ವರುಣನ ಆಗಮನವಾಗಿದೆ. ಹಬ್ಬದ ದಿನ ದಾವಣಗೆರೆ, ಹಾವೇರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಜೊತೆಗೆ ಅತೀ ಹೆಚ್ಚು ಉಷ್ಣಾಂಶ ದಾಖಲಾಗುತ್ತಿರುವ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ. ನಿನ್ನೆ ಬಳ್ಳಾರಿ, ಹಾವೇರಿ, ಬೀದರ್, ವಿಜಯಪುರ, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗಿದೆ.