ಬಳ್ಳಾರಿ, ಏಪ್ರಿಲ್ 19: ನಗರದ ಬೆಂಗಳೂರು ರಸ್ತೆಯಲ್ಲಿ ಮಾರುಕಟ್ಟೆಗೆ ಕುಟುಂಬದೊಂದಿಗೆ ಶಾಪಿಂಗ್‌ಗೆ ಬಂದಿದ್ದ ಯುವತಿಯೊಬ್ಬಳ ಬಳಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ, ರಸ್ತೆಯಲ್ಲೇ ಧರ್ಮದೇಟು ತಿದ್ದ ಘಟನೆ ನಡೆದಿದೆ.
ಶನಿವಾರ ಯುವತಿ ತನ್ನ ಕುಟುಂಬದವರೊಂದಿಗೆ ಮಾರುಕಟ್ಟೆಗೆ ಶಾಪಿಂಗ್‌ಗೆ ಬಂದಿದ್ದ ವೇಳೆ, ಅಪರಿಚಿತ ಯುವಕನೊಬ್ಬ ಅವಳ ಬಳಿ ಬಂದು ಅಸಭ್ಯವಾಗಿ ವರ್ತನೆ ನಡೆಸಿದ್ದಾನೆ. ತಕ್ಷಣವೇ ಯುವತಿ ತನ್ನ ಕುಟುಂಬದವರಿಗೆ ವಿಷಯವನ್ನು ತಿಳಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬದವರು ತಕ್ಷಣ ಯುವಕನನ್ನು ಹಿಡಿದು ನಡುರಸ್ತೆಯಲ್ಲೇ ಧರ್ಮದೇಟು ನೀಡಿದ್ದಾರೆ. ರಸ್ತೆಯ ಮಧ್ಯೆ ನಡೆದ ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯರು ಯುವಕನಿಗೆ ಗದರಿಸಿ ಗೊಂದಲವನ್ನೇ ತಪ್ಪಿಸಿ ಸ್ಥಳದಿಂದ ಓಡಿಸಿದರು.
ಮೆಟ್ರೋದಲ್ಲಿ ರೊಮ್ಯಾನ್ಸ್ ಮಾಡಿದ ಲವ್‌ಬರ್ಡ್ಸ್..!ವೈರಲ್ ವಿಡಿಯೋಗೆ ಆಕ್ರೋಶ!
ಬೆಂಗಳೂರಿನ ‘ನಮ್ಮ ಮೆಟ್ರೋ’ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರೇಮಿಗಳೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಘನತೆ ಮತ್ತು ಶಿಸ್ತಿನ ಬಗ್ಗೆ ಪ್ರಶ್ನೆಗಳು ಮೂಡಿವೆ.
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಈ ಘಟನೆಯಲ್ಲಿ, ಯುವಕ-ಯುವತಿಯೊಬ್ಬರು ಸಾರ್ವಜನಿಕರ ಸಮ್ಮುಖದಲ್ಲಿ ಅನುಚಿತವಾಗಿ ವರ್ತಿಸಿದ್ದಾರೆ. ವಿಡಿಯೋದಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ಕಂಡುಬಂದಿದೆ. ಈ ಜೋಡಿಯ ವರ್ತನೆಯನ್ನು ಗಮನಿಸಿದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಇಂತಹ ಕೃತ್ಯವು ಸಾರ್ವಜನಿಕ ಸ್ಥಳದ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ಟೀಕಿಸಿದ್ದಾರೆ.
ಈ ಘಟನೆಯ ವಿಡಿಯೋವನ್ನು ಕೆಲವು ಪ್ರಯಾಣಿಕರು ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ‘ನಮ್ಮ ಮೆಟ್ರೋ’ ಖಾತೆಯನ್ನು ಟ್ಯಾಗ್ ಮಾಡಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ, “ಸಾರ್ವಜನಿಕ ಸ್ಥಳದಲ್ಲಿ ಇಂತಹ ಕೃತ್ಯ ಸ್ವೀಕಾರಾರ್ಹವಲ್ಲ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಕೆಲವರು ಈ ಘಟನೆಯನ್ನು ದೆಹಲಿ ಮೆಟ್ರೋದಲ್ಲಿ ನಡೆಯುವ ಇಂತಹ ಘಟನೆಗಳಿಗೆ ಹೋಲಿಸಿ, “ಬೆಂಗಳೂರು ದೆಹಲಿಯ ಮಾರ್ಗವನ್ನು ತುಳಿಯುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.
ಈ ಘಟನೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಕಾಪಾಡುವ ಬಗ್ಗೆ ಚರ್ಚೆ ತೀವ್ರಗೊಂಡಿದೆ. “ಮೆಟ್ರೋ ನಿಲ್ದಾಣದಂತಹ ಸಾರ್ವಜನಿಕ ಸ್ಥಳಗಳು ಮಕ್ಕಳು, ಮಹಿಳೆಯರು, ಕುಟುಂಬಗಳು ಮತ್ತು ಹಿರಿಯರಿಗೂ ಮೀಸಲಾಗಿವೆ. ಇಲ್ಲಿ ಇಂತಹ ಅನುಚಿತ ವರ್ತನೆ ಸಂಪೂರ್ಣವಾಗಿ ಖಂಡನೀಯ” ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ. “ನಮ್ಮ ಮೆಟ್ರೋದ ಘನತೆಯನ್ನು ಕಾಪಾಡಲು ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಂತಹ ವರ್ತನೆಗೆ ಅವಕಾಶವಿಲ್ಲ” ಎಂದು ಕೆಲವರು ಕಿಡಿಕಾರಿದ್ದಾರೆ. ಈ ಘಟನೆಯಿಂದ ಬೆಂಗಳೂರಿನ ಸಭ್ಯತೆ ಮತ್ತು ಸಂಸ್ಕೃತಿಯ ಬಗ್ಗೆಯೂ ಪ್ರಶ್ನೆಗಳು ಮೂಡಿವೆ.
ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ನಗರದ ಜನರಿಗೆ ಆಧುನಿಕ ಮತ್ತು ಸುರಕ್ಷಿತ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಆದರೆ, ಇಂತಹ ಘಟನೆಗಳು ಮೆಟ್ರೋದ ಘನತೆಗೆ ಧಕ್ಕೆ ತರುತ್ತಿವೆ. “ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಸಂಯಮದಿಂದ ವರ್ತಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಸಾರ್ವಜನಿಕರು ಒತ್ತಿಹೇಳಿದ್ದಾರೆ.
ಈ ಘಟನೆಯಿಂದಾಗಿ ಮೆಟ್ರೋದಲ್ಲಿ ಕಟ್ಟುನಿಟ್ಟಾದ ಭದ್ರತೆ ಮತ್ತು ನಿಯಮಾವಳಿಗಳನ್ನು ಜಾರಿಗೊಳಿಸುವ ಅಗತ್ಯವನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ. “ಇಂತಹ ಕೃತ್ಯಗಳನ್ನು ತಡೆಗಟ್ಟಲು ಮೆಟ್ರೋ ಆಡಳಿತವು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಜನರು ಆಗ್ರಹಿಸಿದ್ದಾರೆ.