ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗುತ್ತೋ ಅನ್ನುವುದು ಜನರ ಭಾವನೆ: ಬಸವರಾಜ ಬೊಮ್ಮಾಯಿ

Untitled design 2025 04 10t174203.755

ಹಾವೇರಿ: ಹಾಲು, ಅಲ್ಲೋಹಾಲು, ಎದ್ಯುತ್ ದರ ಹೆಚ್ಚಳ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ. ಹಾವೇರಿ ಜಿಲ್ಲೆಯಲ್ಲಿ ಅಹೋರಾತ್ರಿ ಹೋರಾಟ ಆರಂಭ ಮಾಡಿದ್ದೇವೆ. ಕರ್ನಾಟಕ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ಹಾಲು, ಆಲೊಹಾಲು, ಎಲೆಕ್ಷಿಸಿಟಿ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿದೆ. ಸರ್ಕಾರ ದಿವಾಳಿಯಾಗಿದೆ. ಬರುವಂತಹ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಭಷಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್‌ನ ಶಾಸಕರೇ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಅಂತ ಹೇಳಿದ್ದಾರೆ.

ADVERTISEMENT
ADVERTISEMENT

ಪಿಡಬ್ಲ್ಯುಡಿ, ಎಲೆಕ್ನಿಕ್ ಕಾಂಟಾಕ್ಟರ್, ಅಬಕಾರಿ ಗುತ್ತಿಗೆದಾರರು ಎಲ್ಲರೂ ಭ್ರಷ್ಟಾಚಾರ ಹೆಚ್ಚಾಗಿದೆ ಅಂತ ಆರೋಪಿಸಿದ್ದಾರೆ. ಇಷ್ಟೆಲ್ಲಾ ಆದರೂ ಮುಖ್ಯಮಂತ್ರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಬಡವನ ಬದುಕು ಭಾರವಾಗಿದೆ. ಗ್ಯಾರೆಂಟಿಯನ್ನೂ ಸರಿಯಾಗಿ ನೀಡದೇ ದೊಡ್ಡ ಪ್ರಮಾಣದ ತೆರಿಗೆಯ ಭಾರವನ್ನು ಜನರ ಮೇಲೆ ಹಾಕಿದ್ದಾರೆ. ಹಾಲಿನ ಸಬ್ಸಿಡಿ ರೈತರಿಗೆ ಕೊಡುವ ಬದಲು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಅದರ ವಿರುದ್ಧ ಜನರ ಧ್ವನಿಯಾಗಿ ಹೋರಾಟ ನಡೆಸಿದ್ದೇವೆ ಎಂದು ಹೇಳಿದರು.

ಎಲೆಕ್ಷಿಕ್ ಮೀಟರ್ ಅಳವಡಿಕೆಯಲ್ಲಿ ಬಹಳ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಅಂತ ಗುತ್ತಿಗೆದಾರರು ದಾಖಲೆ ಸಮೇತ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕೇವಲ 700 ರೂ. ಇರುವ ಮೀಟರ್‌ಗಳಿಗೆ ಐದರಿಂದ ಆರು ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ. ಯಾವಾಗ ಈ ಸರ್ಕಾರ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಾತಿ ಗಣತಿ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಮಾಡತ್ತದೆ ಮಾಡಲಿ, ಜಾತಿ ಗಣತಿ ವರದಿಯನ್ನು ಕೊಟ್ಟು ಒಂದು ವರ್ಷವಾಯಿತು. ಸಿಎಂ ಸಿದ್ದರಾಮಯ್ಯ ಅವರು ಅದನ್ನು ಯಾಕೆ ಮುಚ್ಚಿಟ್ಟುಕೊಂಡಿದ್ದಾರೊ ಗೊತ್ತಿಲ್ಲ. ಅವರು ಬಿಡುಗಡೆ ಮಾಡಲು ಏನು ಸಮಸ್ಯೆಯಾಗಿದೆ. ಅವರು ಬಿಡುಗಡೆ ಮಾಡಲಿ ಆ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version