ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹ*ತ್ಯೆ

Untitled design 2025 04 05t103859.668
ADVERTISEMENT
ADVERTISEMENT

ಬೆಂಗಳೂರು : ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಪರಾರಿಯಾಗಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ನಡೆದಿದೆ. ಶಾರದಾ (35) ಎಂಬ ಮಹಿಳೆಯನ್ನು ಅವಳ ಪತಿ ಕೃಷ್ಣನಿಂದಲೇ ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

 ಮೃತ ಶಾರದಾ ಬಾಗೇಪಲ್ಲಿ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದವರು. ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ನಿರ್ಜನ ರಸ್ತೆಯಲ್ಲಿ ಪತಿ ಕೃಷ್ಣ ಎರಡು ಚಾಕುವಿನಿಂದ ಅವಳ ಕುತ್ತಿಗೆಗೆ ಇರಿದು ಕೊಲೆಗೈದು ಪರಾರಿಯಾಗಲು ಯತ್ನಿಸಿದ್ದಾನೆ.

ನಂತರ ಕೃಷ್ಣ ಪರಾರಿಯಾಗಲು ಯತ್ನಿಸಿದರೂ, ಅಲ್ಲಿನ ಸ್ಥಳೀಯರು ಅವನನ್ನು ತಕ್ಷಣವೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಕೊಲೆಕೃತ್ಯಕ್ಕೆ ಅಕ್ರಮ ಸಂಬಂಧವೇ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಭವಿಸಿದ ತಕ್ಷಣವೇ, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅವರೊಂದಿಗೆ ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಕೂಡ ಬಂದಿದ್ದು, ಮೃತ ಶಾರದಾಳ ಶವವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಪತಿ ಕೃಷ್ಣ ತನ್ನ ಪತ್ನಿಯ ಮೇಲೆ ಅಕ್ರಮ ಸಂಬಂಧದ ಬಗ್ಗೆ ಅನುಮಾನ ಪೋಷಿಸುತ್ತಿದ್ದ ಎನ್ನಲಾಗಿದೆ. ಈ ಅನುಮಾನವೇ ಹತ್ಯೆಗೆ ಕಾರಣವೆಂಬ ಶಂಕೆ ವ್ಯಕ್ತವಾಗಿದೆ.

 ಈ ಘಟನೆಗೆ ಸಂಬಂಧಿಸಿದಂತೆ ಸುತ್ತಮುತ್ತಲಿನ ನಿವಾಸಿಗಳು ಹಾಗೂ ಸಾರ್ವಜನಿಕರಲ್ಲಿ ಭಯ ಮನೆಮಾಡಿದೆ. ಒಂದು ಮಹಿಳೆ ನಿರ್ಜನ ರಸ್ತೆಯಲ್ಲಿ ಹೀಗೆ ಬರ್ಬರವಾಗಿ ಕೊಲೆಯಾಗಿರುವುದು ಮಹಿಳಾ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಪಿ ಸಾರಾ ಫಾತಿಮಾ ಅವರು, ಈ ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕೂಡಲೇ ನಮ್ಮ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಶಾರದಾ ಎಂಬ ಮಹಿಳೆ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಕೊಲೆ ಹಿಂದಿರುವ ನಿಖರ ಕಾರಣ ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟವಾಗಲಿದೆ” ಎಂದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version