ಕರ್ನಾಟಕದಾದ್ಯಂತ ಮಾರ್ಚ್ 22ರಂದು “ಕರ್ನಾಟಕ ಬಂದ್” ಜಾರಿಯಾಗಲಿದೆ.ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿವೆ. ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಹಲ್ಲೆಯಾಗಿರುವುದನ್ನ ನಾವು ಖಂಡಿಸಿ ಬಂದ್ ಮಾಡುತ್ತಿದ್ದೇವೆ. ಇಡಿ ಆಟೋ ರಿಕ್ಷಾ ಸಂಪೂರ್ಣ ಬೆಂಬಲ ಕೊಡುತ್ತೇವೆ. ಮರಾಠಿಗರ ದೌರ್ಜನ್ಯದ ವಿರುದ್ಧ ಕ್ರಮ ಆಗಬೇಕು. ಕನ್ನಡಿಗರಾಗಿ ಕನ್ನಡದ ಹೋರಾಟಕ್ಕೆ ಸಾಥ್ ಕೊಡುತ್ತೇವೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಕನ್ನಡಿಗರು ಈ ಬಂದ್‌ಗೆ ಕೈಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತದೆ.
ಬಂದ್ ದಿನ ಏನೇನು ಲಭ್ಯವಿರುತ್ತದೆ?
- ಆಸ್ಪತ್ರೆ
- ಮೆಡಿಕಲ್
- ಹಾಲು
- ಅಗತ್ಯವಸ್ತುಗಳು
- ಮೆಟ್ರೋ
ಬಂದ್ ದಿನ ಏನೇನು ಲಭ್ಯವಿರುವುದಿಲ್ಲ?
- ಓಲಾ, ಉಬರ್, ಆಟೋ
ಬಂದ್‌ಗೆ ಯಾರೆಲ್ಲಾ ಬೆಂಬಲಿಸಿದ್ದಾರೆ?
- ಓಲಾ, ಊಬರ್ ಟ್ಯಾಕ್ಸಿ ಅಸೋಸಿಯೇಷನ್
- ಆಟೋ ಅಸೋಸಿಯೇಷನ್
- ಎಪಿಎಂಸಿ ಸಂಘಟನೆ ಬೆಂಬಲ
ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ
ಮಾರ್ಚ್ 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಕನ್ನಡ ಚಿತ್ರರಂಗ ಕರ್ನಾಟಕ ಬಂದ್‌ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್ ಮಾಡಲಾಗಲ್ಲ ಎಂದರು.
ಬಂದ್‌ಗೆ KSRTC, ಬಿಎಂಟಿಸಿ ನೌಕರರ ಸಂಘ ಬೆಂಬಲ
ಇನ್ನು ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್‌ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು. ಆದ್ರೆ ಮೆಟ್ರೋ ಬಂದ್ ಕುರಿತು ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಆದರೂ ಸಹ ಅಂದು ಏನಾದರೂ ಪ್ರಯಾಣ ಮಾಡುವ ಪ್ಲ್ಯಾನ್ ಇದ್ದರೆ ಯಾವುದಕ್ಕೂ ಮುಂದೂಡುವುದು ಒಳಿತು.