ಉಗ್ರರ ದಾಳಿ ಖಂಡಿಸಿ, ಕನ್ನಡಿಗರ ರಕ್ಷಣೆಗಾಗಿ ಅಧಿಕಾರಿಗಳನ್ನ ಕಳುಹಿಸಿದ ಸಿಎಂ ಸಿದ್ದರಾಮಯ್ಯ

11ghdf1 (2)
ADVERTISEMENT
ADVERTISEMENT

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ.  ದಾಳಿಯಲ್ಲಿ ಒಬ್ಬ ಪ್ರವಾಸಿಗನು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ 20 ಮಂದಿ ಗಾಯಗೊಂಡಿದ್ದಾರೆ. ಈ ಗಂಭೀರ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ ಹಾಗೂ ತುರ್ತು ಕ್ರಮ ಕೈಗೊಂಡಿದ್ದಾರೆ.

ಘಟನೆಯ ಹಿನ್ನೆಲೆ
ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯ ಮೇಲ್ಭಾಗದ ಪ್ರವಾಸಿ ಪ್ರದೇಶದಲ್ಲಿ, ಶಂಕಿತ ಉಗ್ರರು ನಡೆದ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದಾರೆ. ಈ ದಾಳಿಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ಅಭಿಜಾವನ್ ರಾವ್ ಮತ್ತು ಬೆಂಗಳೂರು ಮೂಲದ ಮಂಜುನಾಥ್ ಎಂಬ ಇಬ್ಬರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಘಟನೆಯ ತೀವ್ರತೆ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ಕರೆದು, ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದರು.

ರಾಜ್ಯದ ತ್ವರಿತ ಸ್ಪಂದನೆ
ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ಅವರು ಯುವಜನ ಮತ್ತು ಕ್ರೀಡಾ ಇಲಾಖೆಯ ಐಪಿಎಸ್ ಅಧಿಕಾರಿ ಚೇತನ್ ಅವರಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪ್ರಭಾವಿತ ಕನ್ನಡಿಗರಿಗೆ ಅಗತ್ಯ ಸಹಾಯ ಒದಗಿಸಲು ನಿರ್ದೇಶನ ನೀಡಿದರು. ಅಲ್ಲದೆ, ಐವರು ಪೊಲೀಸ್ ಅಧಿಕಾರಿಗಳ ತಂಡವೊಂದನ್ನು ಕೂಡ ಘಟನಾ ಸ್ಥಳದತ್ತ ಕಳುಹಿಸಲಾಗಿದೆ.

ಇದೇ ವೇಳೆ, ದೆಹಲಿಯಲ್ಲಿರುವ ಕರ್ನಾಟಕ ರೆಸಿಡೆಂಟ್ ಕಮಿಷನರ್‌ಗಳಿಗೆ ಘಟನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ನೀಡಲಾಗಿದ್ದು, ಅವರು ಕಾಶ್ಮೀರ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ಪಹಲ್ಗಾಮ್‌ನಲ್ಲಿ ನಡೆದ ದಾಳಿ ಅತ್ಯಂತ ಘೋರ. ಇದೊಂದು ಮಾನವೀಯತೆಯ ವಿರುದ್ಧದ ಕೃತ್ಯ. ಈ ದಾಳಿಯಲ್ಲಿ ನಮ್ಮ ರಾಜ್ಯದವರೂ ಬಲಿಯಾಗಿರುವುದು ದುಃಖದ ಸಂಗತಿ. ನಾನು ತಕ್ಷಣ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಧಿಕಾರಿಗಳು ಹಾಗೂ ಕ್ರೀಡಾ ಇಲಾಖೆಯ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ರಾಜ್ಯ ಸರ್ಕಾರ ಈ ಘಟನೆಗೆ ಸ್ಪಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ,” ಎಂದು ತಿಳಿಸಿದ್ದಾರೆ.

“ಅವರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ರಾಜ್ಯದ ನಾಗರಿಕರ ಪ್ರಾಣರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಅಗತ್ಯವಿರುವ ಎಲ್ಲ ರೀತಿಯ ನೆರವು, ವೈದ್ಯಕೀಯ ಸಹಾಯ, ಪ್ರಯಾಣ ವ್ಯವಸ್ಥೆ ಹಾಗೂ ಕುಟುಂಬದವರಿಗೆ ತಕ್ಷಣದ ಪರಿಹಾರ ಒದಗಿಸಲಾಗುವುದು. ಕರ್ನಾಟಕ ಸರ್ಕಾರ ಸದಾ ತನ್ನ ಜನರ ಬೆನ್ನಿಗೆ ನಿಂತಿದೆ,” ಎಂದು ಅವರು ಭರವಸೆ ನೀಡಿದರು.

Exit mobile version