ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2025 03 31t110136.891

ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳು ಹೀಗಿವೆ.

ADVERTISEMENT
ADVERTISEMENT

ಇಲ್ಲಿನ ಹಲವೆಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನತೆ ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕಳೆದ ನಾಲ್ಕು-ಐದು ದಿನಗಳಿಂದ ಕರ್ನಾಟಕದ ಹಲವೆಡೆ ಮಳೆಯಾಗಿದೆ. ಈಗಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 3 ರಿಂದ ಮಳೆ ಪ್ರಾರಂಭವಾಗಲಿದ್ದು, ಮುಂದಿನ ಆರು ದಿನಗಳವರೆಗೆ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಒಣಹವೆ ಮುಂದುವರಿಯಲಿದೆ.

ತಾಪಮಾನ ಮತ್ತು ಬಿಸಿಲಿನ ಅಬ್ಬರ

ರಾಜ್ಯದ ಹಲವೆಡೆ ತಾಪಮಾನ ಉಷ್ಣ ಮಟ್ಟ ತಲುಪಿದೆ. ರಾಯಚೂರಿನಲ್ಲಿ 43-44 ಡಿಗ್ರಿ ಸೆಲ್ಸಿಯಸ್‌ ಮಟ್ಟದಲ್ಲಿ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಬಹುದು. ಬಿಸಿಲಿನ ತೀವ್ರತೆ ಹೆಚ್ಚಿದ ಕಾರಣ, ಕೆಲವೆಡೆ ಕಚೇರಿ ಸಮಯ ಬದಲಾವಣೆ ಕೂಡ ಆಗಬಹುದೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ:

ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮಳೆಯಾಗುವ ಸಾಧ್ಯತೆ ಇದ್ದು, ಸಂಜೆಯ ಹೊತ್ತಿಗೆ ತಂಪಾದ ವಾತಾವರಣ ಎದುರಾಗಬಹುದು.

ಮುನ್ನಚ್ಚರಿಕೆ

ಇದೆಲ್ಲದರ ನಡುವೆಯೂ, ಬಿರುಬಿಸಿಲಿನ ನಡುವೆಯೂ ವರುಣ ರಾಜ್ಯದ ಹಲವು ಭಾಗಗಳಲ್ಲಿ ತಂಪೆರೆಸುತ್ತಿದ್ದಾನೆ. ಮುಂಬರುವ ದಿನಗಳಲ್ಲಿ ಹವಾಮಾನದಲ್ಲಿ ಇನ್ನಷ್ಟು ಬದಲಾವಣೆಗಳಾಗುವ ಸಾಧ್ಯತೆ ಇರುವುದರಿಂದ, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

Exit mobile version