ಲಾರಿ ಡ್ರೈವರ್ ಮಗಳು ಟಾಪರ್: ದ್ವಿತೀಯ ಪಿಯುನಲ್ಲಿ ರಾಜ್ಯಕ್ಕೆ ಪ್ರಥಮ

Siddu stalin kcr (31)

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ.

600ಕ್ಕೆ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಎಲ್.ಆರ್. ಸಂಜನಾ ಬಾಯಿ, ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಸಂಜನಾ ಬಾಯಿ ಒಬ್ಬ ಲಾರಿ ಡ್ರೈವರ್ ಪುತ್ರಿಯಾಗಿದ್ದಾಳೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದಲ್ಲಿ ಸಂಜನಾ ಬಾಯಿ ವಾಸವಾಗಿದ್ದಾರೆ.

ADVERTISEMENT
ADVERTISEMENT

ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಾಶ್ರೀ ಎಸ್. 600ಕ್ಕೆ 599 ಅಂಕ ಗಳಿಸುವ ಮೂಲಕ ಟಾಪರ್​ ಆಗಿದ್ದರೆ, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

ರಾಜ್ಯಕ್ಕೆ 3ನೇ​ ಪಡೆದ ವಿದ್ಯಾರ್ಥಿನಿ ಪ್ರತೀಕ್ಷಾ. ಪಿ

ಬೆಂಗಳೂರಿನ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಪ್ರತೀಕ್ಷಾ ಪಿ ರಾಜ್ಯಕ್ಕೆ ‌3ನೇ ಸ್ಥಾನ ಪಡೆದುಕೊಂಡಿದ್ದಾಳೆ. ಬೆಂಗಳೂರಿನ ಎಎಸ್​ಸಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿರೋ ಪ್ರತೀಕ್ಷಾ ಪಿ 600ಕ್ಕೆ 597 ಅಂಕ ಪಡೆದುಕೊಂಡಿದ್ದಾರೆ.

ಇನ್ನೂ, ರಾಜ್ಯದಲ್ಲಿ ಉಡುಪಿ ಜಿಲ್ಲೆ 93.90 ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಶೇ.53.29, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.82.54ರಷ್ಟು ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version