ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ, ಅಧಿಕ ಬಿಸಿಲು

ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ, ಅಧಿಕ ಬಿಸಿಲು

Untitled Design 2025 03 03t105259.785

ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚುತ್ತಿದೆ. ಬೆಳಗಾವಿ ಏರ್‌ಪೋರ್ಟ್‌ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನವಾಗಿದ್ದರೆ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಈ ಉಷ್ಣಾಂಶ ಹೊನ್ನಾವರ, ಕಾರವಾರ, ಪಣಂಬೂರು ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ, ಬೆಂಗಳೂರಿನ ಎಚ್‌ಎಎಲ್‌ನಲ್ಲಿ ತಾಪಮಾನ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲಿಯೇ ಉಳಿದಿದೆ.

ADVERTISEMENT
ADVERTISEMENT
ಕರಾವಳಿ ಮತ್ತು ಒಳನಾಡಿನ ತಾಪಮಾನ

ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 36-38 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಕರ್ನಾಟಕದ ಕಲಬುರಗಿಯಲ್ಲಿ 36-37 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ಬೆಂಗಳೂರು ಮತ್ತು ಆಗುಂಬೆಯಲ್ಲಿ 34-36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ತಾಪಮಾನ ಪರಿಸ್ಥಿತಿ

ವಿಜಯಪುರದಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದ್ದು, ಬೀದರ್ ಮತ್ತು ಧಾರವಾಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಚಿಂತಾಮಣಿಯಲ್ಲಿಯೂ ಸ್ವಲ್ಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಣಹವೆ ಮುಂದುವರೆಯುವ ಪ್ರದೇಶಗಳು

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ತಾಪಮಾನ ವಿವರ

ಬೆಂಗಳೂರು ನಗರದ ಗರಿಷ್ಠ ತಾಪಮಾನ 32.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.7 ಡಿಗ್ರಿ ಸೆಲ್ಸಿಯಸ್ ಆಗಿದೆ. ಎಚ್‌ಎಎಲ್‌ನಲ್ಲಿ ಗರಿಷ್ಠ 30.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕೆಐಎಎಲ್‌ನಲ್ಲಿ ಗರಿಷ್ಠ 32.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.0 ಡಿಗ್ರಿ ಸೆಲ್ಸಿಯಸ್ ಹಾಗೂ ಜಿಕೆವಿಕೆಯಲ್ಲಿ ಗರಿಷ್ಠ 31.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Exit mobile version