ಆರು ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ: ಸಚಿವ ಎಂ.ಬಿ. ಪಾಟೀಲ್!

Befunky Collage 2025 03 04t190603.039

2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು ರೂ 90.00 ಕೋಟಿಗಳ ವೆಚ್ಚದಲ್ಲಿ ಆಯೋಜಿಸಲು ಸರ್ಕಾರವು ಅನುಮೋದನೆ ನೀಡಿರುತ್ತದೆ. ಇದರಲ್ಲಿ ಇಲ್ಲಿಯವರೆಗೆ ರೂ 75.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸಮಾವೇಶವು ಇತ್ತಿಚೆಗೆ ಫೆಬ್ರವರಿ 14ರಂದು ಮುಕ್ತಾವಾಗಿದ್ದು, ಸಮಾವೇಶಕ್ಕಾಗಿ ತಗುಲಿದ ವಾಸ್ತವಿಕ ವೆಚ್ಚದ ವಿವರಗಳನ್ನು ಕ್ರೋಢೀಕರಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.

ADVERTISEMENT
ADVERTISEMENT

ಸಮಾವೇಶದಲ್ಲಿ ಒಟ್ಟು 3250 ಉದ್ದಿಮೆದಾರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ 266, ವಿದೇಶಗಳಿಂದ 72, ಕರ್ನಾಟಕ ರಾಜ್ಯದಿಂದ 2892 ಉದ್ದಿಮೆದಾರರು ಭಾಗವಹಿಸಿದ್ದರು. ಒಟ್ಟು 98 ಕಂಪನಿಗಳೊಂದಿಗೆ ಒಡಂಬಡಿಕೆಗಳಾಗಿವೆ. ಅವುಗಳ ಹೂಡಿಕೆಯು ರೂ. 6,23,970 ಕೋಟಿಯಾಗಲಿದೆ. ಅಲ್ಲದೆ, ರೂ. 4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆದಿರುತ್ತಾರೆ ಎಂದು ತಿಳಿಸಿದರು.

ಈ ಹಿಂದೆ ನಡೆದ ಇನ್ವೆಸ್ಟ್ ಕರ್ನಾಟಕ – 2022ರ ಸಮಾವೇಶದಲ್ಲಿ ಉದ್ಯಮ ಪ್ರಾರಂಭಿಸಲು 57 ಕಂಪನಿಗಳೊಂದಿಗೆ ಒಟ್ಟು 5,41,696/- ಕೋಟಿ ಬಂಡವಾಳ ಹೂಡಲು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು. ಸದರಿ 57 ಕಂಪನಿಗಳಲ್ಲಿ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 20 ಕಂಪನಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪ್ರಸ್ತಾವಗಳಿಂದ ಒಟ್ಟು ರೂ. 2,01,167 ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಹಾಗೂ 70,740 ಉದ್ಯೋಗ ಸೃಜನೆಯಾಗಲಿದೆ ಇವುಗಳಲ್ಲಿ 2 ಯೋಜನೆಗಳು ಅನುಷ್ಠಾನಗೊಂಡಿರುತ್ತದೆ. ಮುಂದುವರೆದು ಈ ಸಮಾವೇಶದ ಸಮಯದಲ್ಲಿ 606 ಯೋಜನೆಗಳಿಗೆ ಒಟ್ಟು ರೂ 3,26,015/- ಹೂಡಿಕೆಗೆ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಅನುಮೋದನೆ ನೀಡಲಾಗಿತ್ತು ಎಂದು ತಿಳಿಸಿದರು.

Exit mobile version