ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸುವ ಮುನ್ನವೇ, ಕರ್ನಾಟಕ-ಆಂಧ್ರಪ್ರದೇಶ ಗಡಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಆಗಿದೆ. ಕರ್ನಾಟಕ-ಆಂಧ್ರ ಗಡಿಯಲ್ಲಿರುವ ಮುಳಬಾಗಿಲಿನ ನಂಗಲಿ ಚೆಕ್ಪೋಸ್ಟ್ ಮಾರ್ಗದಲ್ಲಿ ಸ್ಫೋಟಕ ವಸ್ತುಗಳನ್ನ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಅನುಮಾನಗೊಂಡು ತಪಾಸಣೆ ನಡೆಸಿದ ಭದ್ರತಾ ಸಿಬ್ಬಂದಿ ಶಾಕ್ ಆಗಿದ್ದಾರೆ. ವಾಹನದಲ್ಲಿ 1200 ಜಿಲೆಟಿನ್ಗಳು, 7 ಬಾಕ್ಸ್ಗಳಲ್ಲಿ ವೈರ್ಗಳು, 6 ಡೆಟೋನೆರ್ಸ್ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ. ಸ್ಫೋಟಕಗಳನ್ನ ಸಾಗಿಸುತ್ತಿದ್ದ ಆಸೀಫ್ ಹಜರತ್ ಎಂಬ ವ್ಯಕ್ತಿಯನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಸ್ಥಳದಿಂದ ಪರಾರಿಯಾದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಂಧಿತ ಆರೋಪಿಯನ್ನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ಸ್ಫೋಟಕ ವಸ್ತುಗಳ ಸಾಗಾಟದ ಉದ್ದೇಶದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಪೊಲೀಸರ ಭದ್ರತೆ ಹೆಚ್ಚಿಸಲು ಸೂಚನೆ ನೀಡಲಾಗಿದೆ.