ಪಕ್ಕಾ BREAKING ಅಂದ್ರೆ ಗ್ಯಾರಂಟಿ ನ್ಯೂಸ್. ಮಾಜಿ ಉಪಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಶಿಸ್ತು ಉಲ್ಲಂಘಿಸಿ, ಶಿವಮೊಗ್ಗದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ರಾಜ್ಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಬಗ್ಗೆ ಗ್ಯಾರಂಟಿ ನ್ಯೂಸ್ ಏಪ್ರಿಲ್ 20 2024ರಂದೇ ವಿಸ್ತೃತ ಪಕ್ಕಾ ವರದಿ ಮಾಡಿತ್ತು. ಗ್ಯಾರಂಟಿ ನ್ಯೂಸ್ EXCLUSIVE ಸುದ್ದಿ ಈಗ ನಿಜವಾಗಿದೆ.