ರಾಜ್ಯ ಕಾಂಗ್ರೆಸ್ ಸರ್ಕಾರದ “ಗ್ಯಾರಂಟಿ” ಯೋಜನೆಯ ಪರ-ವಿರೋಧ ಮಾತುಗಳು ಆರಂಭದಿಂದಲೂ ಕೇಳಿ ಬರುತ್ತಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನ ಕಟುವಾಗಿ ಟೀಕಿಸುವವರು ಇದ್ದಾರೆ, ಹೊಗಳುವವರು ಇದ್ದಾರೆ. ಹಾಸನದ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ, ಧನ್ಯವಾದವನ್ನ ಸಿಎಂ ಸಿದ್ದರಾಮಯ್ಯಗೆ ಅರ್ಪಿಸಿದ್ದಾರೆ. ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಸಿಎಂ, ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು ಬಹುಶ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.