ಬೆಂಗಳೂರು : ಪ್ರಜ್ವಲ್ ರೇವಣ್ಣ ಕಾಮಪುರಾಣದ ವಿರುದ್ಧ ಎಸ್ ಐಟಿ ರಚನೆ ಆಗಿದೆ, ಈ ಬಗ್ಗೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಹೆಚ್ ಡಿ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದ್ದರೆ ಈ ನೆಲದ ಕಾನೂನು ಎಲ್ಲರಿಗೂ ಒಂದೇ ಶಿಕ್ಷೆಯಾಗಲಿದೆ. ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ. ನಾನಾಗಲಿ ದೇವೇಗೌಡರಾಗಲಿ ಯಾವತ್ತಿಗೂ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ನಮ್ಮ ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿಕೊಂಡು ಬಂದಿದ್ದೇವೆ ಎಂದರು.