ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹೇಳಿಕೆ ನೀಡಿದ್ದ ಯತೀಂದ್ರಗೆ ಸಂಕಷ್ಟ ಶುರುವಾಗಿದೆ. ಯತೀಂದ್ರ ಹೇಳಿಕೆ ವಿರುದ್ಧ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಯತೀಂದ್ರ ಹೇಳಿಕೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಬಿಜೆಪಿ, ಮಾಜಿ ಶಾಸಕ ಯತೀಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಯತೀಂದ್ರ, ನಾನು ಸಿಬಿಐ ವರದಿಯಲ್ಲಿ ಉಲ್ಲೇಖ ಆಗಿರುವ ಅಂಶವನ್ನ ಹೇಳಿದ್ದೇನೆ ಅಷ್ಟೇ.ನಾನು ಕಾನೂನು ಹೋರಾಟ ಮಾಡುತ್ತೇನೆ ಅಂತ ಯತೀಂದ್ರ ಹೇಳಿದ್ದಾರೆ.