ಬೆಂಗಳೂರಿನ ಜೆಪಿ ಭವನ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಸಮನ್ವಯ ಸಮಿತಿಯ ಮೊದಲನೇ ಸಭೆ ನಡೆಯಿತು.ಈ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ ತೇಜಸ್ವಿ ಸೂರ್ಯ ಮಾತನಾಡಿದರು.ಎರಡು ಪಕ್ಷದ ನಾಯಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೊಂದಾಣಿಕೆ ಮಾಡಿಕೊಂಡು ತೇಜಸ್ವಿ ಸೂರ್ಯ ರವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸುವುದಾಗಿ ಜೆಡಿಎಸ್ ಮುಖಂಡರು ಆಶ್ವಾಸನೆ ನೀಡಿದರು. ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ದೇಶದ ಪ್ರಧಾನ ಮಂತ್ರಿ ಮಾಡುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸವನ್ನು ಮಾಡಬೇಕೆಂದು ಕಾರ್ಯಕರ್ತರಿಗೆತೇಜಸ್ವಿ ಸೂರ್ಯ ಕರೆ ಕೊಟ್ಟರು.