ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸಿದ್ದಾರೆ.
ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಟವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎನ್ಪಿ ಮಹೇಶ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.