ಮಧ್ಯಪ್ರದೇಶ: ವಿಜಯಪುರದಲ್ಲಿ 2 ವರ್ಷದ ಬಾಲಕ ಬೋರ್ವೆಲ್ಗೆ ಬಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶುಕ್ರವಾರ ಆರು ವರ್ಷದ ಬಾಲಕ ಬೋರ್ವೆಲ್ಗೆ ಬಿದ್ದಿದ್ದಾನೆ. ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಬಾಲಕ ತೆರೆದ ಬೋರ್ವೆಲ್ ಬಳಿ ಆಟವಾಡುತ್ತಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ.
ಘಟನೆಯ ನಂತರ ಮಧ್ಯಪ್ರದೇಶ ವಿಪತ್ತು ತುರ್ತು ನಿರ್ವಹಣಾ ಪಡೆಯ (SDERF) ತಂಡವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ವಾರಣಾಸಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ( NDRF) ಕಾರ್ಯಾಚರಣೆ ನಡೆಸುತ್ತಿದೆ. ಪೈಪ್ ಮೂಲಕ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದ್ದು, ಬಾಲಕನ ಸ್ಥಿತಿಯನ್ನು ತಿಳಿಯಲು ಸಿಸಿಟಿವಿ ಕ್ಯಾಮೆರಾವನ್ನು ಇಳಿಸಲಾಗಿದೆ. ಆದರೂ ಸಿಸಿಟಿವಿ ಕ್ಯಾಮೆರಾ ಬಾಲಕನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ತಿಳಿಸಿದ್ದಾರೆ.