ಮಹಾಕುಂಭ ಮೇಳ 2025 ರಲ್ಲಿ ಭಾಗವಹಿಸಲು ಬೆಳಗ್ಗೆ 11.30ರ ಸುಮಾರಿಗೆ ಪ್ರಯಾಗ್ರಾಜ್ಗೆ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಂತರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಸಚಿವ ಅಮಿತ್ ಶಾ ಅವರು ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಸಂತರು ಕೂಡ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ಮಹಾಕುಂಭಮೇಳ ಭೂಮಿಯ ಮೇಲಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ. ಜೊತೆಗೆ ಭೂಮಿ ಮೇಲೆ ಒಂದೇ ಕಡೆ ಹೆಚ್ಚು ಜನರು ಸೇರುವ ಸ್ಥಳವೂ ಆಗಿದೆ. 45 ದಿನಗಳಲ್ಲಿ 40 ಕೋಟಿಗೂ ಹೆಚ್ಚು ಜನರು ಪ್ರಯಾಗ್ರಾಜ್ಗೆ ಭೇಟಿ ನೀಡುತ್ತಿದ್ದಾರೆ.
ಹೆಚ್ಚಿನ ಜನರು ಮಹಾಕುಂಭಮೇಳಕ್ಕೆ ಸೇರುತ್ತಿದ್ದಾರೆ. ಫಿಫಾ ವರ್ಲ್ಡ್ ಕಪ್ ನೋಡಲು ಸೇರುವ ಜನರಿಗಿಂತ ಹೆಚ್ಚು ಜನರು ಮಹಾಕುಂಭಮೇಳಕ್ಕೆ ಸೇರುತ್ತಿದ್ದಾರೆ. ಹೀಗಾಗಿ ಮಹಾಕುಂಭಮೇಳ ಭೂಮಿಯ ಮೇಲೆ ಹೆಚ್ಚಿನ ಜನರು ಒಂದೆಡೆ ಸೇರುವ ಸ್ಥಳವೂ ಆಗಿದೆ.
ಮಹಾ ಕುಂಭಮೇಳ.. ಕೋಟ್ಯಂತರ ಭಕ್ತರನ್ನ ಸೆಳೆಯುತ್ತಿರೋ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಸಂಗಮ.. ಪ್ರಯಾಗ್ರಾಜ್ ಮಿನಿ ಭಾರತದಂತೆ ಕಾಣಿಸ್ತಿದೆ.. ಊಹೆಗೂ ಮೀರಿ ಭಕ್ತ ಸಾಗರವೇ ಹರಿದು ಬಂದಿದೆ.. 144 ವರ್ಷಗಳಿಗೊಮ್ಮೆ ಬರೋ ಮಾಹಾಕುಂಭಮೇಳ ಆ ಭೋಲೇನಾಥನ ಆರಾಧನೆಯಲ್ಲಿ ತೇಲಿಸುತ್ತಿದೆ.
ರಾತ್ರಿ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಪ್ರಯಾಗರಾಜ್ನ ಅದ್ಭುತ ಫೋಟೋಗಳನ್ನು ಮಹಾಕುಂಭ ಹಂಚಿಕೊಂಡಿದೆ. ಮಹಾಕುಂಭ ನಡೆಯುತ್ತಿರುವ ವಿಹಂಗಮ ನೋಟದ ಫೋಟೋಗಳು ಅದಾ
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc