ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡು ಇಂದಿರಾಗಾಂಧಿ ವಸತಿ ಶಾಲೆಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.
ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.
Continue Reading