ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ, ನಾನು ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ಮರಿತಿಬ್ಬೇಗೌಡರು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧವೂ ತೀವ್ರ ಅಸಮಾಧಾನ ಹೊರಹಾಕಿದ್ದು, ಜೆಡಿಎಸ್ ಗೂ ಗುಡ್ ಬೈ ಹೇಳಿದ್ದಾರೆ