ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಅಂತ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಪಿಲಿಭಿತ್ನಲ್ಲಿ ಚುನಾವಣಾರ್ಯಾಲಿಯಲ್ಲಿ ಮಾತನಾಡಿದ ನರೇಂದ್ರ ಮೋದಿ, ಕಾಂಗ್ರೆಸ್ ತನ್ನ ಪ್ರಣಾಳಿಕೆಯು ಮುಸ್ಲಿಂ ಲೀಗ್ನದು, ಅವರ ಸ್ವಂತದ್ದಲ್ಲ ಅಂತ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್ನ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ ಟೀಕಿಸಿದ್ರು. ಪ್ರಧಾನಿ ಮೋದಿಯವರ ಹೇಳಿಕೆಗಳ ಕುರಿತು ಈಗಾಗಲೇ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.