ದೇಶದಲ್ಲಿ ಒಂದೆಡೆ ಲೋಕಸಭಾ ಚುನಾವಣೆಯ ಕಾವು ಜೋರಾಗುತ್ತಿದ್ದರೆ. ಇತ್ತ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರೆಲ್ಲರೂ ಪ್ರಚಾರದಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಆದರೆ ಇಲ್ಲೊಬ್ಬ ಮೋದಿ ಭಕ್ತ ಮಾತ್ರ ತನ್ನ ಅಭಿಮಾನದ ಪರಾಕಾಷ್ಠೆ ಮೆರೆದಿದ್ದಾನೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ತನ್ನ ಬೆರಳನ್ನೇ ಕತ್ತರಿಸಿಕೊಂಡು, ರಕ್ತವನ್ನ ದೇವರಿಗೆ ಸಮರ್ಪಿಸಿದ್ದಾನೆ. ಹೌದು ಶಾಕ್ ಅನ್ಸಿದ್ರು ಸತ್ಯ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರುಣ್ ವರ್ಣೇಕರ್ ಎಂಬ ವ್ಯಕ್ತಿ ಅರ್ಪಿಸಿದ್ದಾನೆ. ಈ ವ್ಯಕ್ತಿ ಮೋದಿಗಾಗಿ ಗುಡಿಯನ್ನೂ ನಿರ್ಮಿಸಿ, ಪೂಜೆಯನ್ನ ಮಾಡುತ್ತಿದ್ದಾನೆ. ಅಲ್ಲದೇ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಗೋಡೆ ಮೇಲೆ ರಕ್ತದಲ್ಲಿ ರಕ್ತದಲ್ಲಿ ಬರೆದಿದ್ದಾರೆ. ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, ‘‘ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ’’ ಎಂದು ಬರೆದಿದ್ದಾರೆ.