ಪ್ರಜ್ವಲ್ ರೇವಣ್ಣ ಪ್ರಕರಣದಿಂದ ದೇವೇಗೌಡರ ಕುಟುಂಬದ ವಿರುದ್ಧವೇ ಸ್ವಪಕ್ಷದ ಶಾಸಕರು ತಿರುಗಿಬಿದ್ದಿದ್ದಾರೆ. ಈ ಬಗ್ಗೆ ಖಾರವಾಗಿಯೇ ಟ್ವೀಟ್ ಮಾಡಿರುವ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, ಇತ್ತಿಚಿನ ದಿನಗಳಲ್ಲಿ *ಹಾಸನದ ಲೀಲೆಗಳು* ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿವೆ ಅಂತ ಸಮೃದ್ಧಿ ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.