ಇಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಜನ್ಮದಿನ. ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳ 188 ನೇಯ ಜನ್ಮದಿನೋತ್ಸವ ಪ್ರಯುಕ್ತ, ಶ್ರೀ ಸಿದ್ಧಾರೂಢಸ್ವಾಮೀಜಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ ಸಾಮರಸ್ಯ ಮತ್ತು ವಂಚಿತರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ಜೀವನ ಮತ್ತು ಕಾರ್ಯಗಳು ಎಲ್ಲಾ ಜೀವಿಗಳ ಕಲ್ಯಾಣಕ್ಕೆ ಗಾಢವಾದ ಬದ್ಧತೆಗೆ ನಿದರ್ಶನವಾಗಿವೆ. ಅವರು ಯಾವಾಗಲೂ ಏಕತೆ ಮತ್ತು ದಯೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಸದಾ ಶ್ರಮಿಸುತ್ತೇವೆ ಅಂತ ತಿಳಿಸಿದ್ದಾರೆ.