ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಆಗಿದ್ದ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧರಾಗಿದ್ದ ಕೆ. ಅಣ್ಣಾಮಲೈರವರು 2019ರಲ್ಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಿದ್ದರು.
ಭಾರತೀಯ ಜನತಾ ಪಾರ್ಟಿಯು ಕೆ. ಅಣ್ಣಾಮಲೈರವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿತ್ತು. ಪಕ್ಷ ಸಂಘಟನೆಯ ಜವಾಬ್ದಾರಿಯೊಂದಿಗೆ ಅಣ್ಣಾಮಲೈರವರು ಬಿಜೆಪಿಯ ಪ್ರಮುಖ ನಾಯಕರಾಗಿದ್ದರು. ಈ ಮೂಲಕ ಅಣ್ಣಾಮಲೈರವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದಂತೆ ಆಗಿದೆ.
ಹೌದು ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳು ಅವರ ನಿರ್ಗಮಕ್ಕೆ ಕಾರಣವೆಂದು ತಿಳಿದುಬಂದಿದೆ. ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷನನ್ನು ಪಕ್ಷದ ಎಲ್ಲಾ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಲಾಗುತ್ತದೆ ಎಂದು ಬಿಜೆಪಿ ನಾಯಕ ದೃಢಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಏಪ್ರಿಲ್ 7ರಂದು ನಡೆಯಲಿದ್ದು, ಏಪ್ರಿಲ್ 9ರಂದು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಕಿಶನ್ ರೆಡ್ಡಿ ಅವರು ಏಪ್ರಿಲ್ 7ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದು, ಹೊಸ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಿ ಆಯ್ಕೆ ಮಾಡಲಿದ್ದಾರೆ ತಿಳಿದುಬಂದಿದೆ.