ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ

Untitled design 2025 04 23t231945.606
ADVERTISEMENT
ADVERTISEMENT

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪಹಲ್ಗಾಮ್ ನಡೆದ ಉಗ್ರರ ದಾಳಿ ದೇಶಾದ್ಯಾಂತ ಆಕ್ರೋಶಕ್ಕೆ ಕಾರಣವಾಗಿದೆ. ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 25 ಮಂದಿ ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯೊಬ್ಬರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಭದ್ರತಾ ಪಡೆಗಳ ಪ್ರಕಾರ, ಈ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರು ಭಾಗಿಯಾಗಿದ್ದು, ದಾಳಿ ನಂತರ ಅವರು ಅಡಗಿರುವ ಮಾಹಿತಿ ಲಭ್ಯವಾಗಿಲ್ಲ. ದಾಳಿಯ ನಂತರ ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಇದರಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಸೇನೆ ಮತ್ತು ಸ್ಥಳೀಯ ಪೊಲೀಸರು ಭಾಗವಹಿಸಿದ್ದಾರೆ.

ಈ ಘಟನೆಗೆ ಸಂಬಂಧಪಟ್ಟ ಯಾವುದೇ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಹುಮಾನ ಘೋಷಣೆ ಮಾಡಿದ್ದಾರೆ. ದಾಳಿಯಲ್ಲಿ ಭಾಗವಹಿಸಿರುವ ಭಯೋತ್ಪಾದಕರ ಬಗ್ಗೆ ಮಾಹಿತಿಯನ್ನು ನೀಡಿದವರಿಗೆ ರೂ. 20 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಅನಂತನಾಗ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಸಾರ್ವಜನಿಕರನ್ನು ಈ ಘಟನೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡುವಂತೆ ವಿನಂತಿಸಿದ್ದಾರೆ. ಈ ಬಗ್ಗೆ ಖಚಿತವಾದ ಮಾಹಿತಿ ನೀಡಿದವರ ಗುರುತು ಮತ್ತು ವಿವರಗಳನ್ನು ಗೋಪ್ಯವಾಗಿ ಇಡಲಾಗುತ್ತದೆ ಎಂಬ ಭರವಸೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ವ್ಯಕ್ತಿಗಳ ಬಗ್ಗೆ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

Exit mobile version