ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ಅಮಿತ್ ಶಾ ಘಟನಾ ಸ್ಥಳಕ್ಕೆ

11ghdf1

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಸೌದಿ ಅರೇಬಿಯಾದಲ್ಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಸಾಧಿಸಿ ಮಾಹಿತಿ ಪಡೆದಿದ್ದಾರೆ. ಉಗ್ರರ ದಾಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಘಟನಾ ಸ್ಥಳಕ್ಕೆ ಭೇಟಿ ನೀಡಲು ಪ್ರಧಾನಿ ಅವರು ಅಮಿತ್ ಶಾ ಅವರಿಗೆ ನಿರ್ದೇಶನ ನೀಡಿದ್ದಾರೆ. ಈ ಸೂಚನೆಯಂತೆ ಅಮಿತ್ ಶಾ ಅವರು ಪಹಲ್ಗಾಮ್‌ಗೆ ತೆರಳಿದ್ದಾರೆ.

ADVERTISEMENT
ADVERTISEMENT

ದಾಳಿಯ ಕುರಿತು ಚರ್ಚಿಸಲು ಅಮಿತ್ ಶಾ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ಮತ್ತು ವೈದ್ಯಕೀಯ ತಂಡಗಳು ತಕ್ಷಣವೇ ತೆರಳಿವೆ.

ಈ ದಾಳಿಯಲ್ಲಿ ಕನ್ನಡಿಗ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ತಮ್ಮ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದರು. ದಾಳಿಯಲ್ಲಿ ಒಟ್ಟು 12 ಜನ ಗಾಯಗೊಂಡಿದ್ದಾರೆ.

ಈ ದಾಳಿ ಜುಲೈ 3 ರಿಂದ ಎರಡು ಮಾರ್ಗಗಳ ಮೂಲಕ ಪ್ರಾರಂಭವಾಗಲಿರುವ 38 ದಿನಗಳ ಅಮರನಾಥ ಯಾತ್ರೆಗೆ ದೇಶಾದ್ಯಂತ ನೋಂದಣಿ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಿದೆ. ಈ ಘಟನೆಯಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವ ಸಾಧ್ಯತೆ ಇದೆ.

Exit mobile version