ಶ್ರೀನಗರ: ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರ ಪೊಲೀಸರೊಂದಿಗೆ ಭಾರತೀಯ ಸೇನೆ ಇಂದು ಉಧಂಪುರದ ಬಸಂತ್‌ಗಢದಲ್ಲಿ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ವೇಳೆ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಲಾಗಿದ್ದು, ಭೀಕರ ಗುಂಡಿನ ಕಾಳಗ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ನಮ್ಮ ಧೈರ್ಯಶಾಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾದರೂ, ಎಲ್ಲ ಪ್ರಯತ್ನಗಳ ಹೊರತಾಗಿಯೂ ಅವರು ವೀರಮರಣವನ್ನಪ್ಪಿದರು.
Based on specific intelligence, a joint operation with Jammu and Kashmir Police was launched today in Basantgarh, Udhampur. Contact was established, and a fierce firefight ensued. One of our Bravehearts sustained grievous injuries in the initial exchange and later succumbed… pic.twitter.com/klN9RqL1Rq
— ANI (@ANI) April 24, 2025
ಪ್ರಸ್ತುತ ಕಾರ್ಯಾಚರಣೆ ಮುಂದುವರಿದಿದ್ದು, ಭಯೋತ್ಪಾದಕರನ್ನು ನಿಗ್ರಹಿಸಲು ಸೇನೆ ಮತ್ತು ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಘಟನೆ ದೇಶದಾದ್ಯಂತ ಶೋಕದ ವಾತಾವರಣ ಸೃಷ್ಟಿಸಿದೆ.