ತಿರುವನಂತಪುರಂ:ಸಾರಿಗೆ ಬಸ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.
ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕಲರಕೋಡ್ ಪ್ರದೇಶದಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಡಿಕ್ಕಿಯ ಪರಿಣಾಮದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಕಾರನ್ನು ಸ್ವಲ್ಪ ಕತ್ತರಿಸಿ ಒಳಗಿದ್ದವರನ್ನು ಹೊರಗೆ ತೆಗೆಯಲಾಯಿತು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ನಂತರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.