- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ
- ತನಿಖೆ ತೀವ್ರಗೊಳಿಸಿದ ಸಿಬಿಐ ಅಧಿಕಾರಿಗಳು
- ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮತ್ತಿಬ್ಬರ ಬಂಧನ..!
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧ ಇಬ್ಬರನ್ನ ಬಂಧಿಸಲಾಗಿದೆ. ತನಿಖೆ ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳು, ಪಾಟ್ನಾ ಮೂಲದ ಇಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಒಂದು ದಿನ ಮೊದಲು, ಮೇ 4 ರಂದು NEET-UG ಪರೀಕ್ಷಾರ್ಥಿಗಳಿಗೆ ವಸತಿಗಾಗಿ ವ್ಯವಸ್ಥೆ ಮಾಡಲು ಈ ಇಬ್ಬರು ನಿಯೋಜನೆಗೊಂಡಿದ್ದರು. ಅದೇ ದಿನ ಅವರು ಪ್ರಶ್ನೆ ಪತ್ರಿಕೆಯನ್ನು ಕಂಠಪಾಠ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ 13 ಆರೋಪಿಗಳಲ್ಲಿ ನಾಲ್ವರು ಪರೀಕ್ಷಾರ್ಥಿಗಳು ಸೇರಿದ್ದಾರೆ, ನಂತರ ಇನ್ನೂ ಐದು ಮಂದಿಯನ್ನು ಬಂಧಿಸಲಾಗಿದೆ.