ಹುಬ್ಬಳ್ಳಿ : ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ನಿರಂಜನ್ ಹಿರೇಮಠ, ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ ಗೊತ್ತಿಲ್ಲ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ ಅಂತ ಸ್ಪಷ್ಟಪಡಿಸಿದರು. ಅಲ್ಲದೇ ಗೃಹ ಸಚಿವ ಪರಮೇಶ್ವರ್ ಮಾತಿನ ವಿರುದ್ಧವೂ ನಿರಂಜನ ಹಿರೇಮಠ ಕಿಡಿಕಾರಿದ್ದಾರೆ.