ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು CIDಗೆ ವಹಿಸುತ್ತೇವೆ. ಆರೋಪಿಗೆ ಗಂಭೀರ ಶಿಕ್ಷೆ ಆಗುವಂತೆ ಮಾಡುತ್ತೇವೆ ಅಂತ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನೇಹಾ ರಾಜಕೀಯ ಸುತ್ತ ನಡೆಯುತ್ತಿರುವ ರಾಜಕೀಯ ಕೆಸರೆರಚಾಟಕ್ಕೆ ತೆರೆ ಎಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.