ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್ಗೆ ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಅಮೆರಿಕ ಸೇನಾ ಹೆಲಿಕಾಪ್ಟರ್ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.
ಪೊಟೊಮ್ಯಾಕ್ ನದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಲವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಅವಘಡದ ಬೆನ್ನಲ್ಲೇ ವಾಷಿಂಗ್ಟನ್ ಸಮೀಪದಲ್ಲಿ ಎಲ್ಲ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗಿದೆ. ಜೆಟ್ ವಿಮಾನದಲ್ಲಿ 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಅಮೆರಿಕನ್ ಏರ್ಲೈನ್ಸ್ ಖಚಿತಪಡಿಸಿದೆ. ಅಮೆರಿಕ ಸೇನೆಯ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ನಲ್ಲಿ ಮೂವರು ಸೇನಾ ಸಿಬ್ಬಂದಿ ಇದ್ದರು ಎನ್ನಲಾಗಿದೆ.
ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc