ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನಿಂದನಾತ್ಮಕ ಪದ ಬಳಕೆ ಮಾಡಿದ ಸಚಿವ ಜಮೀರ್ ಅಹ್ಮದ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ. ಚನ್ನಪಟ್ಟಣ ಉಪ ಚುನಾವಣೆ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬಳಿಸಿದ ಜಮೀರ್ ಭಾಷೆಯಿಂದ ಕುಮಾರಸ್ವಾಮಿಯವರಿಗೆ ಮಾತ್ರ ಅವಮಾನ ಆಗಿಲ್ಲ. ಇಡೀ ಒಕ್ಕಲಿಗ ಜನಾಂಗಕ್ಕೆ ಅವಹೇಳನ ಮಾಡಲಾಗಿದೆ.
ಇದನ್ನು ಓದಿ : ಮುಸ್ಲಿಂ ದಂಗೆಕೋರರಿಂದ ಕುಟುಂಬವನ್ನೇ ಕಳೆದುಕೊಂಡಿದ್ದರು ಖರ್ಗೆ : ಯೋಗಿ ಆದಿತ್ಯನಾಥ್ ತಿರುಗೇಟು!
ಅಲ್ಲದೇ ನಾಡಿನ ಜನರಿಗೂ ಅಪಮಾನ ಮಾಡಿದಂತಾಗಿದೆ. ಎರಡು ಬಾರಿ ಮುಖ್ಯಮಂತ್ರಿಯವರ ಬಗ್ಗೆ ಆಡಿದ ಮಾತು ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಹೆಚ್.ಡಿ ದೇವೇಗೌಡರ ಕುಟುಂಬದ ಬಗ್ಗೆಯೂ ಲಘು ಮಾಡಿದ್ದಾರೆ. ಅಲ್ಲದೇ ಹೇಳಿಕೆಯನ್ನು ಸರ್ಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಸಭ್ಯತೆಯ ಎಲ್ಲೆ ಮೀರಿದ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು ಎಂದು ತೀವ್ರವಾಗಿ ಖಂಡಿಸಿದ ರಾಜ್ಯ ಒಕ್ಕಲಿಗರ ಸಂಘ, ದೇವೇಗೌಡರ ಕುಟುಂಬ ಹಾಗೂ ಕುಮಾರಸ್ವಾಮಿ ಅವರಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಒತ್ತಾಯಿಸಿದ್ದಾರೆ.