ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆ ಆಗಿದೆ. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಗಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಇದು ಬೆಳಗಾವಿಯಲ್ಲಿ ಪ್ರಧಾನಿ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀಸಿದ ಚಾಟಿ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ನ ತುಷ್ಟೀಕರಣದಿಂದ ಇಂಥ ಘಟನೆ ನಡೆಯುತ್ತಿವೆ. ಕಾಂಗ್ರೆಸ್ ದೇಶವಿರೋಧಿ ಪಿಎಫ್ಐ ಸಂಘಟನೆ ಕಾಂಗ್ರೆಸ್ಗೆ ಬೆಂಬಲ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದರು. ತುಷ್ಟೀಕರಣದಿಂದಲೇ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬರಬಾದ್ ಆಗಲಿದೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.