ಹುಬ್ಬಳ್ಳಿ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಖಾದಿರ್ ಎಂಬ ವ್ಯಕ್ತಿ ಕೆಲ ದಿನಗಳ ಹಿಂದೆ ಮನೆಯ ಅಕ್ಕಪಕ್ಕದಲ್ಲಿದ್ದ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ಗಮನಿಸಿ ಬೇಸತ್ತಿದ್ದ ನೆರೆಹೊರೆಯವರು ಕಾನ್ಸ್ಟೇಬಲ್ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. 9 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಲ್ಲಿ ಆರೋಪಿ ಕಾನ್ಸ್ಟೇಬಲ್ ಖಾದಿರ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸ್ಥಳೀಯರು ಧರ್ಮಧೇಟು ನೀಡಿ, ನಂತರ ಆರೋಪಿಯನ್ನು ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿದ್ದ ವಿಡಿಯೋ, ಮತ್ತೆ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಧಾರವಾಡ ಪೊಲೀಸರು ಅಧಿಕೃತ X ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಖಾದಿರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ಇದನ್ನು ಓದಿ: ನನ್ನನ್ನು ಇನ್ಮುಂದೆ ಈ ರೀತಿ ಕರೀಬೇಡಿ: ಕಮಲ್ ಹಾಸನ್!