ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಪ್ರಜ್ವಲ್ ರೇವಣ್ಣ ಡ್ರೈವರ್ ಕಾರ್ತಿಕ್ ವಿಡಿಯೋ ಒಂದನ್ನ ಬಿಡುಗಡೆ ಮಾಡಿದ್ದು, ‘ನಾನು ರೇವಣ್ಣ ಹಾಗೂ ಪ್ರಜ್ವಲ್ ಜೊತೆ ಹದಿನೈದು ವರ್ಷಗಳಿಂದ ಕೆಲಸ ಮಾಡುತ್ತಿದೆ. ಒಂದು ವರ್ಷದ ಹಿಂದಷ್ಟೇ ನಾನು ಕೆಲಸ ಬಿಟ್ಟೆ. ನನ್ನ ಮೇಲೆ ಮಾಡಿದ ದೌರ್ಜನ್ಯ, ನಮ್ಮ ಜಮೀನು ಬರೆಸಿಕೊಂಡಿದ್ದರು. ನನ್ನ ಹೆಂಡತಿ ಮೇಲೆ ಹಲ್ಲೆ ಮಾಡಿದ್ದರು, ಹೀಗಾಗಿ ನಾನು ಅವರ ಮನೆಯಿಂದ ಹೊರಗೆ ಬಂದೆ. ಅವರ ಕುಟುಂಬದ ವಿರುದ್ಧ ಕೇಸ್ ಹಾಕಲು ಸಹ ಮುಂದಾಗಿದೆ. ಆಗ ಬಿಜೆಪಿ ಮುಖಂಡ ದೇವರಾಜೇಗೌಡ ಪರಿಚಯ ಆಯ್ತು, ಅವರ ಬಳಿ ಈ ವಿಚಾರಗಳನ್ನ ಹೇಳಿಕೊಂಡಿದ್ದೆ. ಆಗ, ಅನ್ಯಾಯಕ್ಕೆ ನ್ಯಾಯ ಒದಗಿಸಿ ಕೊಡುವ ಭರವಸೆ ನೀಡಿದ್ದರು. ಆದರೆ, ಅವರು ಕೇಸ್ ತಗೊಳ್ಳಲಿಲ್ಲ. ಹಾಗಾಗಿ ನಾನು ಬೇರೆ ಲಾಯರ್ ಮೂಲಕ ಕೇಸ್ ಹಾಕಿಸಿದೆ. ಆಗ ಮತ್ತೆ ನನ್ನನ್ನು ಕರೆಸಿ, ಕೋರ್ಟ್ ಹೋರಾಟ ಮಾಡಿದರೆ ನಿನಗೆ ನ್ಯಾಯ ಸಿಗಲ್ಲ. ಜನರಿಗೆ ಗೊತ್ತಾಗಬೇಕು ಎಂದರು. ಎಲ್ಲಾ ಮಾದ್ಯಮಗಳ ಎದುರು ಹೇಳಿಕೆ ಕೊಡಿಸಿದರು. ಆಗ ಅವರೇ ನನ್ನ ಜೊತೆ ನಿಂತು ಅವರೇ ಹೇಳಿಕೆ ಕೊಟ್ಟಿದ್ದರು’ ಎಂದು ಕಾರ್ತಿಕ್ ಹೇಳಿದ್ದಾರೆ.