ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನಿಗೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಮಯಾವಕಾಶ ನೀಡುವಂತೆ ವಕೀಲರ ಮೂಲಕ C.I.Dಗೆ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಫೇಸ್ ಬುಲಕ್ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ.