ಲೈಂಗಿಕ ಹಗರಣದಲ್ಲಿ ಸಿಲುಕಿ ದೇಶದಿಂದ ಪರಾರಿ ಆಗಿರುವ ಪ್ರಜ್ವಲ್ ರೇವಣ್ಣ, ಈಗ ಶಾಕ್ ಮೇಲೆ ಶಾಕ್ ಎದುರಾಗಿದೆ. ಪ್ರಜ್ವಲ್ ರೇವಣ್ಣರನ್ನ ಪಕ್ಷದಿಂದ ಅಮಾನತುಗೊಳಿಸಿ ಜೆಡಿಎಸ್ ಕೋರ್ ಕಮಿಟಿ ನಿರ್ಧಾರ ಮಾಡಿದೆ. ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ, ವಿಡಿಯೋಗಳು ಹಾಗೂ ಪೆನ್ ಡ್ರೈವ್ ಬಗ್ಗೆ ಈಗಾಗಲೇ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಇಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.
ಹುಬ್ಬಳ್ಳಿಯಲ್ಲಿ ಇಂದು ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದಿಂದ ಅಮಾನತುಗೊಳಿಸಲು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲು ನಾವು ನಿರ್ಧಾರ ಕೈಗೊಂಡಿದ್ದೇವೆ” ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ