ಕಾಂಗ್ರೆಸ್ ನಾಯಕ, ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವೈನಾಡಿನಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಕಳೆದ ಬಾರಿ ವೈನಾಡಿನಿಂದ ಸ್ಪರ್ಧೆ ಮಾಡಿ ಭರ್ಜರಿ ಗೆಲುವು ದಾಖಲಿಸಿದ್ದ ರಾಹುಲ್ ಗಾಂಧಿ, ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಬೃಹತ್ ರೋಡ್ ಶೋ ನಡೆಸಿ ತಮ್ಮ ಉಮೇದುವಾರಿಕೆಯನ್ನ ಸಲ್ಲಿಕೆ ಮಾಡಲಿದ್ದಾರೆ. ರಾಹುಲ್ ಗಾಂಧಿಯನ್ನ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ಮತ್ತು ಸಿಪಿಎಂ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಿವೆ. ಸಿಪಿಎಂ ನಿಂದ ಆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಡಿ ರಾಜಾ ಪತ್ನಿ ಅನ್ನಿ ರಾಜಾ ಸ್ಪರ್ಧೆ ಮಾಡುತ್ತಿದ್ದರೆ, ಬಿಜೆಪಿಯಿಂದ ಕಳೆದ ಬಾರಿ ಕಾಸರಗೋಡು ವಿಧಾನಸಭೆಯಿಂದ ಸ್ಪರ್ಧಿಸಿ ಸೋತಿದ್ದ ಕೇರಳ ಬಿಜೆಪಿ ಅಧ್ಯಕ್ಷ ಸುರೇಂದರ್ ಅಖಾಡಕ್ಕೆ ಧುಮುಕ್ಕಿದ್ದಾರೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯಂತೆ ಕಂಡು ಬಂದರೂ, ವೈನಾಡಿನಲ್ಲಿ ರಾಹುಲ್ ಗಾಂಧಿಯೇ ಫೇವರೇಟ್ ಎಂಬ ಮಾತುಗಳು ಕೇಳಿ ಬರುತ್ತಿವೆ.