ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರತೊಡಗಿದ್ರೆ, ಕರ್ನಾಟಕದ ಸುರುಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಜ್ವರ ಜಾಸ್ತಿ ಆಗುತ್ತಿದೆ. ರಾಜಾವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಬಿಜೆಪಿಯಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ರಾಜುಗೌಡ ನಾಯಕಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈಗಿನಿಂದಲೇ ಪ್ರಚಾರ ಶುರು ಮಾಡಿರುವ ರಾಜುಗೌಡ, ಸಿಎಂ ಸಿದ್ದರಾಮಯ್ಯ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಚುನಾವಣೆಯನ್ನ ತಮ್ಮ “ಧಮ್”ನಿಂದಲೇ ಗೆದ್ದಿದ್ದಾರೆ ಅಂತ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಜೊತೆಗೆ ಗೃಹಲಕ್ಷ್ಮೀ ಯೋಜನೆಯ ಹಣ 3 – 6 ತಿಂಗಳಿಗೊಮ್ಮೆಬರುತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯ ಬಳಿ ಅಣ್ಣ ಅಂತ ಹೇಳಿ ಹಾಕಿಸ್ತೀನಿ, ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸಿದ್ದರಾಮಯ್ಯ ಏಯ್ ಅಂದ್ರೆ ಸುಮ್ಮನಾಗ್ತಾರೆ ಅಂತ ತಿಳಿಸಿದ್ರು. ಮೇ 7ಕ್ಕೆ ಸುರಪುರ ವಿಧಾಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.