ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ, ಬಂಧನಕ್ಕೆ ಒಳಗಾಗಿರುವ ಉಗ್ರರಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು10 ದಿನ ಎನ್ ಐಎ ಕಸ್ಟಡಿಗೆ ನೀಡಲಾಗಿದೆ. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್ಐಎ ಅಧಿಕಾರಿಗಳು ಮಡಿವಾಳದ ಎಫ್ ಎಸ್ ಎಲ್ ಸೆಂಟರ್ ಬಳಿಯಿರುವ ಇಂಟ್ರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು.