ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಬಾಂಬರ್ನನ್ನ ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಬರ್ ಜೊತೆಗೆ ಮಾಸ್ಟರ್ ಮೈಂಡ್ನನ್ನ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದು, ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಕೋಲ್ಕತಾದಲ್ಲಿ ಬಂಧಿಸಲಾಗಿದೆ.
ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ ನಡೆಸಿತ್ತು.